ಗಣಪತಿ ಪುರಾಣ

ಯಾಜ್ಞವಲ್ಕ್ಯ ಸ್ಮøತಿಯ ಪ್ರಕಾರ ಅಂಬಿಕೆಯು ಗಣಪತಿಯ ತಾಯಿ, ಇನ್ನೊಂದು ಕಥೆಯ ಪ್ರಕಾರ ಗಣೇಶ ಪಾರ್ವತಿಯ ಮೈಯಿಂದ ಹುಟ್ಟಿದವನು. ಸ್ವರ್ಣಗೌರಿಯ ಮಾನಸ ಪುತ್ರ ಈತ. ಗೌರಿ ತನ್ನ ಮೈಕೊಳೆಯಿಂದ ಆಕೃತಿಯೊಂದನ್ನು ಸೃಷ್ಟಿಸಿ ಅದಕ್ಕೆ ಜೀವತುಂಬಿ ಸ್ನಾನ ಮಾಡಲು ಹೋಗಿರುತ್ತಾಳೆ. ತಾಯಿಯ ಅಣತಿಯಂತೆ ಗಣಪ ಮನೆಯನ್ನು ಕಾಯುತ್ತಿರುತ್ತಾನೆ. ಶಿವನು ಮನೆಗೆ ಹಿಂತಿರುಗಿದಾಗ, ಗಣಪ ಅವನನ್ನು ತಡೆದು ಮನೆಯೊಳಗೆ ಹೋಗಲು ಅಡ್ಡಿಪಡಿಸುತ್ತಾನೆ. ಇದರಿಂದ ಕುಪಿತಗೊಂಡ ಶಿವ ತನ್ನ ತ್ರಿಶೂಲದಿಂದ ಅವನ ಶಿರವನ್ನು ಕತ್ತರಿಸುವನು. ಸ್ನಾನ ಮುಗಿಸಿ ಬಂದ ಗೌರಿ ಮಗನ ಕಳೇಬರ ಕಂಡು ರೋದಿಸುತ್ತಾಳೆ. ಹೆಂಡತಿಯನ್ನು ಸಮಾಧಾನ ಪಡಿಸುವ ಸಲುವಾಗಿ ಶಿವ ತನ್ನ ಗಣಗಳನ್ನು ಕರೆದು ಉತ್ತರ ದಿಕ್ಕಿಗೆ ಯಾರಾದರೂ ತಲೆ ಹಾಕಿ ಮಲಗಿದ್ದರೆ ಅಂತವರ ತಲೆಯನ್ನು ಕತ್ತರಿಸಿ ತರುವಂತೆ ಆಜ್ಞಾಪಿಸುತ್ತಾನೆ. ಶಿವನ ಗಣಗಳು ಉತ್ತರ ದಿಕ್ಕಿನಲ್ಲಿ ಮಲಗಿದ್ದ ಮರಿಯನೆ ತಲೆಯನ್ನು ಕತ್ತರಿಸಿ ತರುತ್ತಾರೆ. ನಂತರ ಅದನ್ನು ಗಣಪನ ಶರೀರಕ್ಕೆ ಅಂಟಿಸುವರು . ಗಣಪ ಗಜಮುಖನಾಗಿ, ಗಣಗಳ ಅಧಿಪತಿ ಹೀಗಾಗಿ, ಮೊದಲ ಪೂಜೆಗೆ ಅರ್ಹನಾಗುತ್ತಾನೆ.

 

ಗಣೇಶನ ಹಬ್ಬ :

ಮೊದಲ ದಿನ ಸ್ವರ್ಣಗೌರಿಯ ಹಬ್ಬ. ಮಾರನೇ ದಿನವೇ ಗಣೇಶನ ಹಬ್ಬ. ಸ್ವರ್ಣಗೌರಿ ಭೂಲೋಕಕ್ಕೆ ಬಂದ ಮಾರನೇ ದಿನವೇ ಗಣಪ ತಾಯಿಯನ್ನು ಕರೆದುಕೊಂಡು ಹೋಗಲು ಅಜ್ಜಿ ಮನೆಗೆ ಬಂದು ವಿವಿಧ ಭಕ್ಷ್ಯ ಭೋಜನಗಳನ್ನು ಭಕ್ಷಿಸಿ ತಾಯಿಯೊಂದಿಗೆ ಹಿಂತಿರುಗುತ್ತಾನೆ. ಸಾಮಾನ್ಯವಾಗಿ ಈ ಹಬ್ಬ ಭಾದ್ರಪದ ಚೌತಿಯ ದಿನದಂದು ಬರುತ್ತದೆ. ಆ ದಿನ ಯಾರೂ ಚಂದ್ರನನ್ನು ನೋಡಬಾರದು. ಗಣೇಶ ಭೂ ಲೋಕಕ್ಕೆ ಬದ ದಿನವನ್ನು ವಾರಗಟ್ಟಲೆ ಸಂಭ್ರಮದಿಂದ ಆಚರಿಸುವುದು ಅನಾದಿ ಕಾಲದಿಂದಲೂ ರೂಡಿಯಲ್ಲಿದೆ.

Related posts

Leave a Comment